ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು (ಅಕ್ಟೋಬರ್ 13, 2025) ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ

ಮೂಲಕ ಅವರು ಜನಪ್ರಿಯತೆ ಗಳಿಸಿದರು. ನಂತರ ‘ಪಂಚರಂಗಿ’, ‘ಮತ್ತೊಂದ್ ಮದುವೇನಾ..!’ ಮತ್ತು ‘ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *