• ಮೀರಿದರೆ ಬೀಳುತ್ತೆ ದಂಡ

ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ.ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ.2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ ನಲ್ಲಿ ಅಧಿ ಸೂಚನೆ ಹೊರಡಿಸಿದ್ದು ರಾಜ್ಯದಲ್ಲಿ ಕೇವಲ 34 ಲಕ್ಷ ಎಚ್‌ಎಸ್‌ಆರ್ಪಿಗಳು ಮಾತ್ರ ನೋಂದಾಯಿಸಲ್ಪಟ್ಟಿವೆ.ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸ್ವದಾಯು ತೈಲ ಬೇಕಾದಲ್ಲಿ ಲಿಂಕ್ ಒತ್ತಿ : https://amzn.in/d/8LAoxjq

Leave a Reply

Your email address will not be published. Required fields are marked *