Oplus_131072

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್ಎಂ ಕೃಷ್ಣ ಇವರು ದಿನಾಂಕ 10.12.2024ರ ಮಂಗಳವಾರ ಬೆಳಗಿನ ಜಾವ 2:30ಗೆ ನಿಧರಾಗಿದ್ದ ಹಿನ್ನೆಲೆ ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ದಿವಂಗತರ ಅಂತ ಕ್ರಿಯೆಯನ್ನು ದಿನಾಂಕ 11- 12- 2024 ಬುಧವಾರದಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಹದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದ್ದು ದಿವಂಗತರ ಗೌರವಾರ್ಥವಾಗಿ ದಿನಾಂಕ 11- 12- 2024ರ ಬುಧವಾರದಂದು ನಡೆಸಲು ಇಚ್ಚಿಸಿದ್ದು ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ

Oplus_131072

ಕಚೇರಿಗಳಿಗೆ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ಅನುದಾನಿತ ವಿದ್ಯೆ ಸಂಸ್ಥೆಗಳಿಗೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಹಾಗೂ 12 -12- 2024 ರತನಕ ಶೋಕಾಚರಣೆ ಮಾಡಲಾಗುವುದು ಹಾಗೂ ಆ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ ನಿಯಮಿತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಬೇಕು ಎಂದು ಅದೇಶಿಸಲಾಗಿದೆ.

Leave a Reply

Your email address will not be published. Required fields are marked *