- ಸುದ್ದಿ ಓದಲು ಲಿಂಕ್ ಒತ್ತಿ

108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಹಿನ್ನಲೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ ಮಾಡಿ ಮುಷ್ಕರ ಮಾಡಲು ಮುಂದಾಗಿದ್ದಾರೆ.ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿಗಳಿಗೆ ಜೀವನ ನಡೆಸಲು ಕಷ್ಟವಾಗುತ್ತಿದ್ದು, ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ. ಮತ್ತೊಂದು ಕಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ.ರಾಜ್ಯದಲ್ಲಿ ಒಟ್ಟು 711 ಆಂಬ್ಯುಲೆನ್ಸ್ಗಳು ಕಾರ್ಯ ನಿರ್ವಹಿಸುತ್ತಿದೆ. ರಾತ್ರಿಯಿಂದ ಸಂಪೂರ್ಣ ಬಂದ್ ಆಗಲಿದ್ದು, ರೋಗಿಗಳಿಗೆ ತೊಂದರೆ ಆದರೆ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದಿದ್ದಾರೆ.

