- ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿದ ಆರಗ ಅಂಡ್ ಟೀಮ್
- ಸಾಗರದ ಮಳೆ ಹಾನಿ ಪ್ರದೇಶಕ್ಕೆ ಆರಗ ಭೇಟಿ

ರಾಜ್ಯಾದ್ಯಂತ 6 ತಂಡಗಳಾಗಿ ಪ್ರವಾಹ ಅಧ್ಯಯನ ಆರಂಭಿಸಿದ್ದು ಮಾಜಿ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರ ತಂಡವು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ನೆರೆ, ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿತು. ಕೆಲ ದಿನಗಳ ಹಿಂದಷ್ಟೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಹಾದಿಗಲ್ಲಿನಲ್ಲಿ ಮರ ಬಿದ್ದು ಅಸುನೀಗಿದ ಸಚಿನ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್.ರವಿಕುಮಾರ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಹರತಾಳ ಹಾಲಪ್ಪ, ಶಾಸಕರಾದ ಶ್ರೀ ಚೆನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಮತ್ತಿತರರು ಉಪಸ್ಥಿತರಿದ್ದರು.
ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿದ ಆರಗ ಅಂಡ್ ಟೀಮ್

ಆಗಸ್ಟ್ 01 ರಂದು ಮಳೆ ಹಾನಿ ಪ್ರದೇಶಗಳ ವೀಕ್ಷಣೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ತಂಡದ ಸದಸ್ಯರ ಸಹಾಯದಿಂದ ಮರವನ್ನು ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸಾಗರದ ಮಳೆ ಹಾನಿ ಪ್ರದೇಶಕ್ಕೆ ಆರಗ ಭೇಟಿ

ಸಾಗರ ತಾಲೂಕಿನಲ್ಲಿ ಮಳೆಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಲಾಯಿತು. ಪ್ರವಾಹ ಅಧ್ಯಯನ ತಂಡದ ಸದಸ್ಯರು ಜೊತೆಗಿದ್ದರು.


