- ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನಲೆ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ವಿರುದ್ಧ ಗೆಲುವು ಸಾಧಿಸಿದ ಶಾಸಕ ಪ್ರದೀಪ್ ಈಶ್ವರ್ ಮಾತುಗಳು ಈ ಲೋಕಸಭಾ ಚುನಾವಣೆಯಲ್ಲಿ ಪಶ್ಚಾತಾಪ ಪಡುವಂತಾಗಿದೆ.ಡಾ ಕೆ ಸುಧಾಕರ್ ಒಂದೇ ಒಂದು ಮತಗಳಿಂದ ಗೆದ್ದರು ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಾಧ್ಯಮಗಳ ಮುಂದೆ ಮಾತನಾಡಿದ್ದು, ಇದೀಗ ಕೊಟ್ಟ ಮಾತಿನಂತೆ ಸ್ಪೀಕರ್ ಯುಟಿ ಖಾದರ್ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ” ಬಾಲ್ಯದಿಂದಲೇ ಪುಣ್ಯ ಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, ‘ಕೊಟ್ಟ ಮಾತು- ಇಟ್ಟ ಹೆಜ್ಜೆ ತಪ್ಪಬಾರದು’ ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ ಮಾಜಿ ಸಚಿವರಾದ ಡಾ.ಕೆ ಸುಧಾಕರ್ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ಸುಧಾಕರ್ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಬರೆದಿದ್ದಾರೆ.ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿ ಎಂದು ಕೆಲವು ಕಿಡಿಗೇಡಿಗಳು ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.



