- ಕರ್ನಾಟಕ ಹೈ ಕೋರ್ಟ್ ಆದೇಶವೇನು?ಸುದ್ದಿ ಓದಿ

ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ.ಈ ವೇಳೆ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಇದಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶವನ್ನು ಹೈಕೋರ್ಟ್ ಡಿಸೆಂಬರ್ 4ರ ವರೆಗೆ ವಿಸ್ತರಿಸಿದೆ.


ಇದಕ್ಕೆ ಪ್ರತಿಯಾಗಿ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ಏಕಸದಸ್ಯ ನ್ಯಾಯಪೀಠದ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದೆ. ಈಗಾಗಲೇ ಚಾಲ್ತಿಯಲ್ಲಿರುವ ಮಧ್ಯಂತರ ಆದೇಶ ಮುಂದುವರಿಯಲಿ. ಜೊತೆಗೆ, ಏಕಸದಸ್ಯ ಪೀಠವೇ ಪ್ರಕರಣದ ಕುರಿತಂತೆ ನಿರ್ಧರಿಸಲು ಆದೇಶಿಸಬಹುದು ಎಂದು ಸಲಹೆ ನೀಡಿದರು.ಇದಕ್ಕೆ ಒಪ್ಪಿಗೆ ಸೂಚಿಸಿದ ನ್ಯಾಯಪೀಠ ಮಧ್ಯಂತರ ಆದೇಶವನ್ನು ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿದೆ.



