- ಸುದ್ದಿ ಓದಲು ಲಿಂಕ್ ಒತ್ತಿ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿ (MISHAP) ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬ್ಯಾಡಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


