
ತೀರ್ಥಹಳ್ಳಿ : ತಾಲೂಕಿನ ನಾಲೂರು ಮುಖ್ಯರಸ್ತೆಯಲ್ಲಿ ಜ.17ರ ರಾತ್ರಿ 1 ಗಂಟೆ ಸುಮಾರಿಗೆ ಬೈಕ್ ಸವಾರ ಗಣೇಶ್ ನಾಯ್ಕ್ (24) ಎಂಬಾತನಿಗೆ ಕೋಳಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಣೇಶ್ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬೈಕ್ ಸವಾರನು ಹಗರಿಬೊಮ್ಮನಹಳ್ಳಿ ಯವನು ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಮೃತದೇಹವನ್ನು ಜೆಸಿ ಆಸ್ಪತ್ರೆಗೆ ರವಾನಿಸಲಾಗಿದ್ದು,ಕುಟುಂಬದವರು ಮೃತದೇಹವನ್ನು ಪಡೆದುಕೊಂಡಿದ್ದಾರೆ. ಪ್ರಕರಣದಲ್ಲಿ ಆಗುಂಬೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಫಾರೆನ್ಸಿಕ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಹಿಟ್ ಅಂಡ್ ರನ್ ಪ್ರಕರಣದಲ್ಲಿ ಅನುಮಾನಾಸ್ಪದ ಕೋಳಿ ಲಾರಿ ಯ ಚಹರೆ ಕಂಡು ಹಿಡಿಯುವಲ್ಲಿ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿಕ್ಕಿ ಹೊಡೆದ ವಾಹನ ಯಾವುದು ಎಂಬ ಮಾಹಿತಿ ಇನ್ನಷ್ಟೇ ಬರಬೇಕಿದೆ.


