ಚಿಕ್ಕಮಗಳೂರು: ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪ ಕೇಳಿಬಂದಿದ್ದು. ಸ್ಟ್ರೇಚ್ಚರ್ ಮೇಲೆ ರೋಗಿ‌ ಉಸಿರಾಟದ ಸಮಸ್ಯೆಯಿಂದ ನರಳಾಡುತ್ತಿದ್ದರೂ, ವೈದ್ಯ ಏನಿಸಿಕೊಂಡ ಮಹಾಶಯ ಹಾಯಾಗಿ ಚೇಂಬರ್‌ ನಲ್ಲಿ ಕುಳಿತುಕೊಂಡು ಮೊಬೈಲ್‌ ನೋಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ (60) ಅವರು ತೀವ್ರ ಉಸಿರಾಟದ ತೊಂದರೆಯಿಂದ ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ರೋಗಿ ತೀವ್ರ ಸಂಕಷ್ಟದಲ್ಲಿ ನರಳುತ್ತಿರುವಾಗಲೇ ವೈದ್ಯರು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ಕುಳಿತಿರುವ ದೃಶ್ಯಗಳು ಕಂಡುಬಂದಿದ್ದು,.ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿರುವ ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ರೋಗಿಯ ಕುಟುಂಬಸ್ಥರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಬಂದು ಸುಮಾರು ಒಂದು ಗಂಟೆ ಕಳೆದರೂ ಸೂಕ್ತ ಚಿಕಿತ್ಸೆ ಸಿಗದೆ ಮಂಜುನಾಥ್ ಪರದಾಡಿದ್ದು, ನಂತರ ತಡವಾಗಿ ಐಸಿಯುವಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *