
ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ಘಟನೆ

ಚಿಕ್ಕಮಗಳೂರು : ಜಿಲ್ಲೆಯ ಎಸ್ಪಿ ಕಚೇರಿಯ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಕಾಂತರಾಜ್ (45) ಮನನೊಂದು ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ.

ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದಲ್ಲಿ ಬಲಗಾಲು ಕಳೆದುಕೊಂಡಿದ್ದ ಹಿನ್ನಲೆಯಲ್ಲಿ ಮಾನಸಿಕವಾಗಿ ಬಳಲಿದ್ದರು ಎನ್ನಲಾಗಿದೆ.ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

