
ಸತ್ಯಶೋಧ ನ್ಯೂಸ್ ಡೆಸ್ಕ್ :ಕನ್ನಡದ ಮೇರು ನಟರಲ್ಲಿ ಒಬ್ಬರಾದ ಸಾಹಸ ಸಿಂಹ ವಿಷ್ಣುವರ್ಧನ್ ರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಲಾಗಿದೆ. ಇದೇ ವೇಳೆ ಸೆ 2 ರಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸ್ಯಾಂಡಲ್ ವುಡ್ ಹಿರಿಯ ನಟಿಯರು ಭೇಟಿಯಾಗಿ. ನಟ ಡಾ.ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿ ಮಾಡಲಾಗಿದೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಹಿರಿಯ ನಟಿಯರಾದಂತ ಜಯಮಾಲ, ಮಾಳವಿಕಾ ಅವಿನಾಶ್ ಹಾಗೂ ಶೃತಿ ಭೇಟಿ ಮಾಡಿದರು.

ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮನವಿಯನ್ನು ಸಲ್ಲಿಸಿದರು.


