
ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮಂಡಗದ್ದೆ ಬಳಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಆಲ್ಟೊ ಕಾರು ಬರುವ ಸಂದರ್ಭದಲ್ಲಿ ಎದುರಿಗೆ ಬಂದ ಅಪ್ಪಚ್ಚಿ ಬೈಕ್ ಗೆ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರಲ್ಲಿ ಒಬ್ಬರ ಕಾಲು ಕಟ್ ಆಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆಲ್ಟೊ ಕಾರು ತೀರ್ಥಹಳ್ಳಿಯ ಕುರುವಳ್ಳಿಯದ್ದು ಎಂದು ಹೇಳಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.







