- ದೇಶವೇ ಹೆಮ್ಮೆ ಪಡುವ ಮನು ಬಾಕರ್ ಗೆ ಮೆಚ್ಚುಗೆಯ ಮಹಾಪೂರಾ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟ ಶೂಟರ್ ಮನು ಬಾಕರ್ ಅವರಿಗೆ ಅಭಿನಂದನೆಗಳು. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಬಾಕರ್ ಗೆ ಕಂಚಿನ ಪದಕ ಜಯಿಸುವ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಭಾರತಕ್ಕೆ ಮತ್ತಷ್ಟು ಪದಕಗಳು ಬರಲಿ ಎಂಬುದು ನಮ್ಮ ಆಶಯ.ಇನ್ನೂ ಇದೇ ವೇಳೆ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಮನು ಬಾಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಅಭಿನಂದನೆಯನ್ನು ತಿಳಿಸಿದ್ದಾರೆ.
