ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಬೆಳಗ್ಗೆ 7 ಗಂಟೆ 30 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಮತ್ತು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಆಗಮನದ ನಿರೀಕ್ಷೆ ಇದೆ.ಈ ಸಂಬಂಧ ಸಕಲ ಸಿದ್ಧತೆ ನಡೆಯುತ್ತಿದೆ.






