- ಹೆಚ್ಚಿನ ಪೊಲೀಸ್ ತನಿಖೆಯ ಅಗತ್ಯವಿರುವ ಹಿನ್ನಲೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.ಹೆಚ್ಚಿನ ಪೊಲೀಸ್ ತನಿಖೆಯ ಅಗತ್ಯವಿರುವ ಹಿನ್ನೆಲೆ ಆರೋಪಿಗಳನ್ನು ಇನ್ನಷ್ಟು ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಈ ಹಿನ್ನೆಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.ಪ್ರಕರಣ ಸಂಬಂಧ ಆರೋಪಿಗಳಿಂದ 10 ಮೊಬೈಲ್ ಸೀಜ್ ಮಾಡಲಾಗಿದೆ. 30 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ, ಮೈಸೂರು, ಬೆಂಗಳೂರಿನ ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ ಎಂದು ಸರ್ಕಾರದ ಎಸ್ ಪಿ ಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು. ಎ 5 ಆರೋಪಿ ನಂದೀಶ್, ಎ 13 ಆರೋಪಿ ದೀಪಕ್ ಗೆ ಪೊಲೀಸರು ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ ಎಂದು ದರ್ಶನ್ ಪರ ವಕೀಲ ಅನಿಲ್ ಬಾಬು ಸಿ ಕೋರ್ಟ್ ಗಮನಕ್ಕೆ ತಂದಿದ್ದಾರೆ.
