ಶಿವಮೊಗ್ಗ : ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಸಂಚಾರ ಸಿಗ್ನಲ್‌ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.ಈ ಹಿನ್ನಲೆ ಶಿವಮೊಗ್ಗದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು,ಈ ವಿಚಾರಕ್ಕೆ ಸಂಬಂಧಿಸಿದಂತೆ

ಶಿವಮೊಗ್ಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ರಾತ್ರಿಯಿಂದಲೇ ಶಿವಮೊಗ್ಗ ನಗರದಾದ್ಯಂತ ಬಾಂಬ್ ಪತ್ತೆ ದಳ ಮತ್ತು ಶ್ವಾನದಳದಿಂದ ಪರಿಶೀಲನೆ ನಡೆಸಿತು. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣ, ಕೆಎಸ್‌ಅರ್‌ಟಿಸಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸಿಟಿ ಸೆಂಟರ್ ಮಾಲ್,

ಸೇರದಂತೆ ಅತೀ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ.ರೈಲ್ವೆ ಹಾಗೂ ವಿಮಾನ ನಿಲ್ದಾಣದಲ್ಲಿ ಅಲರ್ಟ್ ಪ್ರಕಟಿಸಲಾಗಿದೆ. ನಿಲ್ದಾಣಕ್ಕೆ ಪ್ರವೇಶಿಸುವ ಪ್ರಯಾಣಿಕರ ಲಗೇಜ್‌ಗಳ ತಪಾಸಣೆ ನಡೆಸುವಂತೆ ಪೊಲೀಸರಿಗೆ ಸೂಚನೆ ಬಂದಿದೆ. ಇನ್ನೊಂದೆಡೆ ಶಿವಮೊಗ್ಗ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *