- ಸಚಿವ ಕೆ ಜೆ ಜಾರ್ಜ್ ಆಸ್ಪತ್ರೆಗೆ ಭೇಟಿ

ಚಿಕ್ಕಮಗಳೂರಲ್ಲಿ ಹಿಂದೆಂದೂ ಬಾರದ ರೀತಿಯಲ್ಲಿ ಡೆಂಗ್ಯೂ ಮಹಾಮಾರಿ ಉಲ್ಬಣಗೊಂಡಿದ್ದು, ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದೆ. ಡೆಂಗ್ಯೂ ಪ್ರಕರಣಗಳ ಸಂಖ್ಯೆ 350ರ ಗಡಿ ದಾಟಿದ್ದು, ಚಿಕಿತ್ಸೆಗಾಗಿ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನೂರಾರು ರೋಗಿಗಳು ಕ್ಯೂ ನಲ್ಲಿ ನಿಂತಿದ್ದಾರೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ಭೇಟಿ ನೀಡಿದ್ದು, ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ.ಕಳೆದ 15 ದಿನಗಳಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಒಟ್ಟು ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಓರ್ವ ವ್ಯಕ್ತಿ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

