- ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಿದ್ಧತೆ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.ಪ್ರಕಟಣೆ ಹೊರಡಿಸಿರುವ ಇಂಧನ ಸಚಿವ ಜಾರ್ಜ್,ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.ಸದ್ಯ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ.

