
ದಾವಣಗೆರೆ: ಸಾಲದ ಕಂತು ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಅತಿಯಾಗಿ ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡು ಮಾಡಿದ್ದಾನೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಜುಲೈ 8 ರ ಮಧ್ಯಾಹ್ನ ನಡೆದ ಈ ಘಟನೆ ಇದೀಗ ಪೊಲೀಸ್ ದೂರು ಎಫ್ಐಆರ್ನೊಂದಿಗೆ ಬೆಳಕಿಗೆ ಬಂದಿದೆ. ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಸ್ತುತ ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂತಸ್ತೆಗೆ ಚಿಕಿತ್ಸೆ ಮುಂದುವರಿದಿದೆ.
