- ಪ್ರಧಾನ ಅರ್ಚಕ ಸತ್ಯೇಂದ್ರ ಹೇಳಿದಿಷ್ಟು

ಮೊದಲ ಮಳೆಗೆ ಅಯೋಧ್ಯೆಯ ರಾಮಮಂದಿರದ ಮಾಳಿಗೆ ಸೋರುತಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಉತ್ತರ ಪ್ರದೇಶದ ಭಾಗದಲ್ಲಿ ಮಳೆ ಆರಂಭವಾಗಿದ್ದು, ರಾಮಮಂದಿರದ ಮೇಲ್ಛಾವಣೆಯಿಂದ ನೀರು ಸೋರಿಕೆಯಾಗುತ್ತಿದೆ ಎನ್ನಲಾಗಿದೆ.ಈ ಕುರಿತು ಮಾತನಾಡಿರುವ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್, ಬಾಲರಾಮನನ್ನು ಪ್ರತಿಷ್ಠಾಪನೆ ಮಾಡಲಾಗಿರುವ ಗರ್ಭಗುಡಿಯಲ್ಲಿ ಮಳೆ ನೀರು ಸೋರಿಕೆಯಾಗಿದೆ. ಅಲ್ಲದೇ ಇಲ್ಲಿ ಒಳಚರಂಡಿಯ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎಂದು ಹೇಳಿದ್ದಾರೆ.
