ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18, 2025 ರವರೆಗೆ ವಿಸ್ತರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಿಗೆ ಈ ರಜೆ ವಿಸ್ತರಣೆಯ ಆದೇಶ ಜಾರಿಯಾಗಿದೆ.

ನಿರ್ಧಾರದ ಹಿಂದಿನ ಕಾರಣವನ್ನು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಶಿಕ್ಷಕರ ಸಂಪೂರ್ಣ ಸಹಕಾರದ ಅಗತ್ಯವಿದೆ ಎಂದು ತಿಳಿಸಿದ್ದಾರೆ.ಜಾತಿಗಣತಿ ಸಮೀಕ್ಷೆಯ ಕಾರ್ಯವು ರಾಜ್ಯದಾದ್ಯಂತ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ಕೆ ಶಿಕ್ಷಕರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸರ್ಕಾರ ಯೋಜನೆ ರೂಪಿಸಿದೆ. ಈ ಹಿನ್ನೆಲೆಯಲ್ಲಿ, ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ‘ಶಿಕ್ಷಕರು ಜಾತಿಗಣತಿಯಂತಹ ಮಹತ್ವದ ಕಾರ್ಯದಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ, ರಾಜ್ಯದ ಎಲ್ಲಾ ಶಾಲೆಗಳಿಗೆ ಅಕ್ಟೋಬರ್ 18 ರವರೆಗೆ ರಜೆ ಘೋಷಿಸಲಾಗಿದೆ,’ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು

Leave a Reply

Your email address will not be published. Required fields are marked *