
ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆ, ಬಾಕಿ ವಸೂಲಿ ಹೆಸರಿನಲ್ಲಿ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಜಾರಿ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿದೆ.ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ ಅವರು,

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲ ವಸೂಲಿ ಕ್ರಮ ಸರಿಯಾಗಿ ಇರಲಿಲ್ಲ. ಅಮಾನವೀಯ ನಡೆದುಕೊಳ್ಳಲಾಗಿದೆ ಅಂತ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮಸೂದೆ ತರಲು ತಿರ್ಮಾನ ಮಾಡಿದ್ದೇವೆ. ಮಸೂದೆ ಬಗ್ಗೆ ಚರ್ಚೆ ಮಾಡಲಾಗಿದೆ. ಇನ್ನು ಇದೆ ಸಂದರ್ಭದಲ್ಲಿ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುತ್ತದೆ.

ರಾಜ್ಯಪಾಲರ ಅಂಕಿತ ಸಿಕ್ಕ ತಕ್ಷಣವೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಬೀಳಲಿದೆ. ಈ ಮೂಲಕ ಮೈಕ್ರೋ ಫೈನಾನ್ಸ್ ಸಾಲದ ಸುಳಿಗೆ ಸಿಲುಕಿ ಪರಿತಪಿಸುತ್ತಿರುವ ಹಾಗೂ ಸಾವಿಗೆ ಶರಣಾಗುತ್ತಿರುವ ಜನರಿಗೆ ಈ ಸುಗ್ರೀವಾಜ್ಞೆ ವರದಾನ ಆಗಲಿದೆ.


