– ತೀವ್ರ ಅನಾರೋಗ್ಯ ಹಿನ್ನಲೆ

ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ(87) ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರು 26 ಆಗಸ್ಟ್, 1936ರಲ್ಲಿ ಜನಿಸಿದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್, ಮೂರು ಅವಧಿಗೆ ಶಾಸಕ, ಒಂದು-ಅವಧಿಯ ಎಂ ಎಲ್ ಸಿ ಹಾಗೂ 3 ಬಾರಿ ಸಂಸತ್ ಸದಸ್ಯರಾಗಿದ್ದರು.
