- ಉಳ್ಳಾಲ ತಾಲೂಕಿನ ಕುತ್ತಾರು ಮದನಿಯಲ್ಲಿ ಘಟನೆ

ಮಳೆಗೆ ಮನೆಗೋಡೆ ಕುಸಿದು ಘೋರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ನಡೆದಿದೆ. ರಾತ್ರಿ ಸುರಿದ ಭಾರೀ ಮಳೆಗೆ ಮನೆಗೋಡೆ ಕುಸಿದು ದುರಂತ ಸಂಭವಿಸಿದ್ದು ಮೃತರನ್ನು ಯಾಸೀನ್, ಮರಿಯಮ್ಮ, ಮಕ್ಕಳಾದ ರಿಯಾನ್ ರಿಫಾನ್ ಎಂದು ಗುರುತಿಸಲಾಗಿದೆ.ಅಬೂಬಕ್ಕರ್ ಎಂಬುವರಿಗೆ ಸೇರಿದ ಮನೆಯಾಗಿದ್ದು,ಉಳ್ಳಾಲ ಪೊಲೀಸ್ ಠಾಣ ವ್ಯಾಪ್ತಿಯಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ ನೀಡಿ ಸಂತಾಪ ವ್ಯಕ್ತಪಡಿಸಿದ್ದು ಮೃತ ನಾಲ್ವರಿಗೂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
