ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ

ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *