

ಶಿವಮೊಗ್ಗ :ನಾಡಿನ ಮೂಲೆಮೂಲೆಗೂ ಗಣೇಶ ಚತುರ್ಥಿಯ ಹಬ್ಬದ ಸಂಭ್ರಮ ಮನೆಮಾಡಿದೆ. ವಿಶೇಷವಾಗಿ ಮಲೆನಾಡಿನ ತೀವ್ರ ಮಳೆಯ ನಡುವೆಯೂ ಸಾರ್ವಜನಿಕ ಗಣೇಶೋತ್ಸವಗಳನ್ನು ಜನರು ಉತ್ಸಾಹದಿಂದ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ.

ಸುಳುಗೋಡು–ಯಡೂರು ವಿನಾಯಕ ಸೇವಾ ಸಮಿತಿ, ಪ್ರತಿವರ್ಷವೂ ವಿಭಿನ್ನ ಆಕರ್ಷಣೆಗಳ ಮೂಲಕ ಭಕ್ತರ ಮನಗೆದ್ದಿದ್ದು ಹಿಂದಿನ ವರ್ಷ ಮಾಣಿ ಡ್ಯಾಂ ಮಾದರಿಯನ್ನು ನಿರ್ಮಿಸಿ ಎಲ್ಲರ ಮೆಚ್ಚುಗೆ ಪಡೆದಿದ್ದ ಸಮಿತಿ, ಈ ಬಾರಿ ಯಡೂರಿನ ಅಭೀಶ್ ಹಾಗೂ ಪ್ರಜ್ವಲ್ ಮಾಲೀಕತ್ವದ ಸಂಸ್ಥೆ Zoom backgrounds ಕೈಚಳಕದಲ್ಲಿ ಅರಳಿದ ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಸಿಗಂದೂರು ಸೇತುವೆಯ ಅದ್ಭುತ ಮಾದರಿಯು ಇತ್ತೀಚೆಗಷ್ಟೇ ಲೋಕಾರ್ಪಣೆಗೊಂಡ ಸಿಗಂದೂರು ಸೇತುವೆಯ ಅದ್ಭುತ ಮಾದರಿಯನ್ನು ತಯಾರಿಸಿ ಗಣೇಶೋತ್ಸವಕ್ಕೆ ವಿಶಿಷ್ಟ ಮೆರಗು ನೀಡಿದೆ.

ಆದರೆ ಈ ಬಾರಿ ಸಮಿತಿಯ ವಿಶೇಷತೆ ಕೇವಲ ಕಲಾತ್ಮಕತೆಯಲ್ಲಿ ಮಾತ್ರ ಸೀಮಿತವಾಗಿರದೆ, ಗ್ರಾಮದ ಸಮಗ್ರ ಅಭಿವೃದ್ಧಿಯ ಅವಶ್ಯಕತೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗ್ರಾಮಸ್ಥರಲ್ಲಿ ಹೋರಾಟದ ಕಿಚ್ಚು ಹೊತ್ತಿಸುವ ಕೆಲಸವನ್ನೂ ಕೈಗೊಂಡಿದೆ. ಹಬ್ಬದ ಸಂಭ್ರಮದ ನಡುವೆ ಸಮಾಜಮುಖಿ ಚಟುವಟಿಕೆಯನ್ನು ಹಬ್ಬದ ಅಂಗವಾಗಿ ಸೇರಿಸಿರುವುದು ಸ್ಥಳೀಯರಲ್ಲಿ ಹೊಸ ಚೈತನ್ಯವನ್ನು ಉಂಟುಮಾಡಿದೆ.


