- ಬೆಳ್ಳಿ ಬೆಲೆಯಲ್ಲೂ ಇಳಿಕೆ

ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಸತತವಾಗಿ ಏರಿಕೆಯಾಗಿದ್ದು ಇದೀಗ ಚಿನ್ನ ಇಳಿಕೆಯಾಗಿದ್ದು ಗ್ರಾಹಕರಿಗೆ ಸಮಾಧಾನ ತಂದಿದೆ.ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯು ₹ 40 ಮತ್ತು 24 ಕ್ಯಾರಟ್ನ ಒಂದು ಗ್ರಾಂ ಚಿನ್ನದ ಬೆಲೆಯು ₹ 44 ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆಯು ₹ 6,350 ಮತ್ತು 24 ಕ್ಯಾರಟ್ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,927 ಇದೆ. 22 ಕ್ಯಾರಟ್ನ 8 ಗ್ರಾಂ ಚಿನ್ನದ ಬೆಲೆ ₹ 50,800 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 63,500 ಮತ್ತು ₹ 6,35,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್ 8 ಗ್ರಾಂ ಚಿನ್ನದ ಬೆಲೆ ₹ 55,416 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹ 69,270 ಮತ್ತು ₹ 6,92,700 ತಲುಪಿದೆ.ಬೆಳ್ಳಿ ಧಾರಣೆಇತ್ತ ಬೆಳ್ಳಿಯ ಬೆಲೆಯಲ್ಲಿಯೂ ಭಾರಿ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 81 ಹಾಗೂ 8 ಗ್ರಾಂಗೆ ₹ 648 ಇದೆ. 10 ಗ್ರಾಂ ₹ 810 ಹಾಗೂ 1 ಕಿಲೋಗ್ರಾಂ ₹ 81,000 ಬೆಲೆ ಇದೆ.

