ಪೋಡಿ ನಕ್ಷೆ ಇದೀಗ ರೈತರ ಮೊಬೈಲ್ ನಲ್ಲೆ ಸಿಗಲಿದೆ ಮೊಬೈಲ್ ನಲ್ಲಿ ಪೋಡಿ ನಕ್ಷೆ ಪಡೆಯುವುದೇಗೆ? : ರೈತರು ಆನ್​ಲೈನ್ ಮೂಲಕ ಪೋಡಿ ನಕ್ಷೆ ಪಡೆಯಲು ಈ https://bhoomojini.karnataka.gov.in/Service27 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆಯಪ್ ಪೇಜ್ ಓಪನ್ ಆಗುತ್ತದೆ. ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು.ನಂತರ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ಹಾಗೂ ಪಹಣಿಯಲ್ಲಿ ಹೆಸರು ಒಂದೇ ರೀತಿಯಿದ್ದರೆ ಸಮಸ್ಯೆಯಾಗುವುದಿಲ್ಲ. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಪೋಡಿ ನಕ್ಷೆ ಸಿಗುತ್ತದೆ.

Leave a Reply

Your email address will not be published. Required fields are marked *