
ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ. ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

