

ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿ ವಿತರಣೆ ಮಾಡುತ್ತಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ.

ಇಂದಿರಾ ಕಿಟ್ ವಿತರಿಸಲು ರಾಜ್ಯ ಸರ್ಕಾರವು ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ. ತೊಗರಿ ಬೇಳೆ, ಅಡುಗೆ ಎಣ್ಣೆ, ಹೆಸರು ಕಾಳು, ಸಕ್ಕರೆ, ಉಪ್ಪು ಖರೀದಿಗೆ ಪ್ರತ್ಯೇಕ ಟೆಂಡರ್ ಕರೆದು, ಪ್ಯಾಕಿಂಗ್ ಮಾಡುವುದು, ಗೋದಾಮಿನಿಂದ ನ್ಯಾಯಬೆಲೆ ಅಂಗಡಿಗೆ ಸಾಗಾಣೆ ಮಾಡಲು ಖಾಸಗಿ ಏಜೆನ್ಸಿಗೆ ಹೊಣೆ ವಹಿಸುವುದು ಸೇರಿ ಇತ್ಯಾದಿ ಕಾರ್ಯ ಚಟುವಟಿಕೆಗಳ ರೂಪುರೇಷೆ ಸಿದ್ದಪಡಿಸಲಾಗಿದೆ ಎಂದರು.


