
ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು ಧರೆಗುರುಳಿವೆ. ಇದರಿಂದ ಕೆಲವು ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.

ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು.ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು, ಎರಡು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಪೊಲೀಸರು, ಸಾರ್ವಜನಿಕರು ಮರಗಳನ್ನು ತೆರವು ಮಾಡಿ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟರು. ಇವತ್ತು ಮಧ್ಯಾಹ್ನ ಆಯನೂರು, ಕುಂಸಿ ಸುತ್ತಮುತ್ತ ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಮರಗಳು ಧರೆಗುರುಳಿವೆ.




