- 5 ಜಿಲ್ಲೆಗೆ ಅರೇಂಜ್ ಅಲರ್ಟ್

ಕಳೆದ ಒಂದು ವಾರದಿಂದ ಒಂದಲ್ಲಾ ಒಂದು ಕಡೆ ಮಳೆಯಾಗುತ್ತಲೇ ಇದೆ. ಮೇ ತಿಂಗಳ ಅಂತ್ಯದಲ್ಲಿ ಮುಂಗಾರು ಆಗಮಿಸುವ ನಿರೀಕ್ಷೆ ಇದೆ. ಅದಕ್ಕೂ ಮುನ್ನವೇ ಎಲ್ಲೆಡೆ ಮಳೆಯಾಗುತ್ತಿದೆ. ಉಡುಪಿ, ಉತ್ತರ ಕನ್ನಡ, ಕೊಡಗು, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡದಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದ್ದು, ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ.


