
ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ. ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ

.ಏ.5 ರಂದು ದಕ್ಷಿಣ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಕರಾವಳಿ ಪ್ರದೇಶಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಇದೇ ವೇಳೆ ತೀರ್ಥಹಳ್ಳಿ, ಆಗುಂಬೆ ಸೇರಿದಂತೆ ಹಲವೆಡೆ ಇಂದು ಉತ್ತಮ ಮಳೆಯಾಗಿದ್ದು, ಬಿಸಿಯ ತಪದಲ್ಲಿದ್ದ ಜನರಿಗೆ ಮಳೆರಾಯ ತಣ್ಣನೆ ಅನುಭವ ನೀಡಿದ್ದಾನೆ.


