
ಮುಂದಿನ 3 ದಿನಗಳ ಕಾಲ ಕರಾವಳಿ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಲಿದ್ದು, ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಂಜೆ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31°C ಮತ್ತು 20°C ಇರುವ ಸಾಧ್ಯತೆ ಇದೆ.

ಮೇ 17ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇದೆ.

