
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜೂ.15ರವರೆಗೆ ರಾಜ್ಯದಲ್ಲಿ ಮುಂಗಾರು ಅಬ್ಬರ ಹೆಚ್ಚಾಗಲಿದ್ದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ ಎನ್ನಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.ಗುರುವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.9 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ.

