
ಪೂರ್ವ ಅರಬ್ಬಿ ಸಮುದ್ರದಲ್ಲಿ ಉಂಟಾದ ಮೇಲೆ ಸುಳಿಗಾಳಿ ಇರುವ ಕಾರಣ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಳಗಾವಿ, ಉತ್ತರಕನ್ನಡ, ದಕ್ಷಿಣಕನ್ನಡ, ರಾಯಚೂರು, ಕಾರವಾರ ಸೇರಿದಂತೆ ಮತ್ತಿತರ ಕಡೆ ಭಾರೀ ಮಳೆಯಾಗುತ್ತಿದ್ದು, ನದಿಗಳು ಉಕ್ಕಿಹರಿಯುತ್ತಿವೆ.

ಬಯಲುಸೀಮೆ ಜಿಲ್ಲೆಗಳಾದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮದ್ದೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ.