ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಮೂರು ತಿಂಗಳಿಗೆ ಒಮ್ಮೆ ಗೃಹಲಕ್ಷ್ಮೀ ಹಣವನ್ನು ಜಮಾ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ.

ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ ತಾಲೂಕು ಪಂಚಾಯತ್ ಮೂಲಕ ಹಣ ಹಾಕಲಾಗುತ್ತಿದೆ‌. ಹಾಗಾಗಿ ಮಧ್ಯದಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು ನಿಜ, ಆದರೆ ಒಂದೇ ಒಂದು ರೂಪಾಯಿ ಆಚೆ ಈಚೆ ಆಗದಂತೆ ಮಹಿಳೆಯರಿಗೆ ತಲುಪಿಸಲಾಗುತ್ತಿದೆ. ಸ್ಪಷ್ಟತೆ ಮತ್ತು ಬದ್ಧತೆಯಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಪಡಿಸಿದರು.ರಾಜ್ಯ ಸರ್ಕಾರದಿಂದ ಆಗಸ್ಟ್-2025 ವರೆಗಿನ ಗೃಹಲಕ್ಷ್ಮಿ ಕಂತುಗಳನ್ನು ಫಲಾನುಭವಿಗಳ ಖಾತೆ ಜಮೆ ಮಾಡಲಾಗಿದೆ. ಯೋಜನೆ ಆರಂಭವಾದಗಿನಿಂದ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಗೃಹಲಕ್ಷ್ಮಿ ಹಣ ಸಂದಾಯವಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿಯಾದ ಪ್ರತಿ ಕುಟುಂಬದ ಯಜಮಾನಿಗೆ ತಲಾ ರೂ.46,000 ಲಭಿಸಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Leave a Reply

Your email address will not be published. Required fields are marked *