ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ.ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಆರಂಭವಾಗಿದೆ. ಕರ್ತವ್ಯಕ್ಕೆ ಗೈರು ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿ ಎಂ.ರಂಗನಾಥ್ ಅಮಾನತು ಮಾಡಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *