• ರೈತರೇ ದಯವಿಟ್ಟು ಗಮನಿಸಿ

2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್‍ಡಿಆರ್‍ಎಫ್ ಅಥವಾ ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 ಸಾವಿರ ರೂ.ಗಳವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು, ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ, ಸರ್ಕಾರವು ಆದೇಶಿಸಿದೆ.ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ.ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ. ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೂಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೂಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೂಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೂಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲ.

Leave a Reply

Your email address will not be published. Required fields are marked *