Oplus_131072

ಭಾರತದ ಹೆಮ್ಮೆಯ ಉದ್ಯಮಿ ರತನ್‌ಟಾಟಾ (86) ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ.ರತನ್‌ಟಾಟಾ ಅವರನ್ನು ಸೋಮವಾರ ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಂದು ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಈ ಬಳಿಕ ಸಂಜೆ ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ರತನ್ ಟಾಟಾ ಅಂತ್ಯಕ್ರಿಯೆ ನೆರವೇರಲಿದೆ.

Leave a Reply

Your email address will not be published. Required fields are marked *