- ಏನಿದು ಸರ್ಕಾರದ ಆದೇಶ ಸುದ್ದಿ ಓದಿ

ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಈ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಸೂಚಿಸಿದೆ.



