Oplus_131072

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಿಯಂತ್ರಣ ತಪ್ಪಿ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿಣಾಮ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.

ಬಾಳೆಹೊನ್ನೂರು ಮೂರುಗದ್ದೆ-ಜಲದುರ್ಗ ನಡುವಿನ ಜಯಪುರ ಬಳಿ ನಿಯಂತ್ರಣ ತಪ್ಪಿದ ಬಸ್‌ ಪುಟ್ಟಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂ ಆಗಿದೆ.ಬಸ್ ನಲ್ಲಿ 45 ಪ್ರಯಾಣಿಕರಿದ್ದರು ಗಾಯಗೊಂಡವರನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು

Oplus_131072

, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನಲೆ ಮಾಜಿ ಸಚಿವ ಡಿ ಎನ್ ಜೀವರಾಜ್ ಸ್ಥಳಕ್ಕೆ ಭೇಟಿ ನೀಡಿ ಗಾಯಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *