

ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ಭಾರೀ ಕಾಲ್ತುಳಿತ ಉಂಟಾಗಿದೆ. ಪರಿಣಾಮ ಅಘೋರಿ, ನಾಗಸಾಧುಗಳು ಪವಿತ್ರ ಸ್ನಾನವನ್ನು ರದ್ದುಗೊಳಿಸಿದ್ದಾರೆ.

ಮುಂಜಾನೆ ಸಂಭವಿಸಿದ ಮಹಾಕುಂಭ ಕಾಲ್ತುಳಿತದಲ್ಲಿ ಮೂವತ್ತು ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. 25 ಜನರನ್ನು ಗುರುತಿಸಲಾಗಿದ್ದು, ಐವರನ್ನು ಗುರುತಿಸಲಾಗುತ್ತಿದೆ ಎಂದು ಮಹಾಕುಂಭದ ಡಿಐಜಿ ವೈಭವ್ ಕೃಷ್ಣ ಖಚಿತಪಡಿಸಿದ್ದಾರೆ.ಕರ್ನಾಟಕದ ಇಬ್ಬರು ಸಾವು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಅವರ ಮಗಳು ಮೇಘಾ ಹತ್ತರವಾಠ (18) ನಿಧನರಾಗಿದ್ದಾರೆ. ಅಲ್ಲದೆ ಬೆಳಗಾವಿಯ ಶೆಟ್ಟಿಗಲ್ಲಿಯ ಅರುಣ ಕೋಪರ್ಡೆ ಹಾಗೂ ಶಿವಾಜಿ ನಗರದ ನಿವಾಸಿ ಮಹಾದೇವಿ ಕೂಡಾ ಸಾವನ್ನಪ್ಪಿದ್ದಾರೆ.


