- ಕೋಟಿ ಕೋಟಿ ಹಣ, ಹೆಂಡ, ಬಂಗಾರ,ಉಡುಗೊರೆ ಜಪ್ತಿ

ಮಾದರಿ ನೀತಿ ಸಂಹಿತೆ (Model Code of Conduct) ಜಾರಿಯಾಗಿದೆ. ಚುನಾವಣಾ ಆಯೋಗದ (Election Com mission) ಅಧಿಕಾರಿಗಳು ಅಕ್ರಮ ತಡೆಗೆ ಸತತ ಕಾರ್ಯಾಚರಣೆ ನಡೆಸಿದ್ದಾರೆ. ನೀತಿ ಸಂಹಿತೆ ಜಾರಿಯಾಗಿ ಆರೇ ದಿನದಲ್ಲಿ ರಾಜ್ಯಾದ್ಯಂತ 9 ಕೋಟಿ ರೂ.ಗೂ ಹೆಚ್ಚು ನಗದು, ಚಿನ್ನಾಭರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ಫ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 9.64 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಜತೆಗೆ, 15.6 ಲಕ್ಷ ರೂಪಾಯಿ ಮೌಲ್ಯದ ಉಚಿತ ಕೊಡುಗೆಗಳಿಗೆ ಕೊಂಡೊಯ್ಯುತ್ತಿದ್ದ ವಸ್ತುಗಳು, 7.20 ಲಕ್ಷ ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. 53 ಲಕ್ಷಕ್ಕೂ ಅಧಿಕ ಮೌಲ್ಯದ 52.12 ಕೆಜಿ ಮಾದಕ ವಸ್ತುಗಳು ಮತ್ತು 36 ಕೋಟಿ ರೂ.ಗೂ ಅಧಿಕ ಮೌಲ್ಯದ ಅಮೂಲ್ಯ ಲೋಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
