
ತೀರ್ಥಹಳ್ಳಿ: ತಾಲೂಕಿನ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಗದ್ದೆ ಸರ್ಕಾರಿ ಶಾಲೆ ಹಾಗೂ ಸೀಬಿನಕೆರೆ ಅಂಗನವಾಡಿ ಕೇಂದ್ರಗಳಿಗೆ ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ರವರು ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳ ಬಗ್ಗೆ

ವಿಚಾರಿಸಿ ನಂತರ ಮಕ್ಕಳ ಹಾಜರಾತಿ ಪುಸ್ತಕ, ಆಹಾರ ಪದಾರ್ಥ ಹಾಗೂ ಹವಾಮಾನಕ್ಕನುಗುಣವಾಗಿ ಮಕ್ಕಳಿಗೆ ಕೊಡುವ ಹಾಲಿನ ಪ್ರಮಾಣದ ಬಗ್ಗೆ ಚರ್ಚಿಸಿ ವಿದ್ಯಾರ್ಥಿಗಳಿಗೆ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿ ವಿದ್ಯಾವಂತರಾಗಿ ಭವಿಷ್ಯದಲ್ಲಿ ಉನ್ನತ ಹುದ್ದೆಯನ್ನು ಪಡೆಯಿರಿ ಎಂದರು.

ಅಂಗನವಾಡಿಯಲ್ಲಿ ಮಕ್ಕಳಿಗೆ ದಿನನಿತ್ಯ ಉತ್ತಮ ಆಹಾರ ನೀಡಿ ಹಾಗೆಯೇ ನೀಡುವ ಆಹಾರದಲ್ಲಿ ಗುಣಮಟ್ಟವನ್ನು ಮತ್ತು ಶುಚಿತ್ವವನ್ನು ಕಾಪಾಡಿಕೊಳ್ಳಿ ಮಕ್ಕಳಿಗೆ ಬಿಸಿ ನೀರನ್ನು ನೀಡಿ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ವೀರಭದ್ರಪ್ಪ, ಹಾಗೂ ಗುರುರಾಜ್, ತಹಶೀಲ್ದಾರ್ ರಂಜಿತ್, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾ ಅಧಿಕಾರಿ ಶೈಲ, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


