- ಬಗರ್ ಹುಕುಂ ಸಾಗುವಳಿದಾರರು ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ಪರ ನಿಲ್ಲದ ಹಿನ್ನಲೆ

ಮಂಗಳವಾರ ನಡೆದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪ ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರು ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ಪರ ಸಂಸತ್ತಿನಲ್ಲಿ ಧ್ವನಿ ಎತ್ತಲಿಲ್ಲ ಎಂದು ಬಿ.ವೈ.ರಾಘವೇಂದ್ರ ಮೇಲೆ ಕಿಡಿಕಾರಿದರು.ನಾನು ಸೊರಬ ಶಾಸಕನಾಗಿದ್ದ ಸಂದರ್ಭದಲ್ಲಿ 6,200 ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿದ್ದೇನೆ. ಆದರೆ ಸಂಸದ ರಾಘವೇಂದ್ರ ಹಕ್ಕು ಪತ್ರ ಕೊಡುವ ಕೆಲಸ ಮಾಡಲಿಲ್ಲ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಹಾಗೆ ಗೀತಕ್ಕ ನಿಮ್ಮ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲಿದ್ದಾರೆ’ ಎಂದರು.ಚುನಾವಣೆಯಲ್ಲಿ ನನ್ನ ಪರ ಮತ ಚಲಾಯಿಸುವ ಮೂಲಕ ಗೆಲ್ಲಿಸಿ, ನಿಮ್ಮ ಸೇವೆ ಮಾಡಲು ಅವಕಾಶ ನೀಡಬೇಕು. ಗೆದ್ದ ಬಳಿಕ ನಿಮ್ಮ ನಡುವೆಯೇ ಇದ್ದು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರವಸೆ ನೀಡಿದರು.ಈ ವೇಳೆ ನಟ ಶಿವರಾಜ್ ಕುಮಾರ್ ಮಾತನಾಡಿ ನನ್ನ ಪತ್ನಿ ಗೀತಾ ಮಾತನಾಡುವುದು ಕಡಿಮೆ. ಆದರೆ ಜಾಸ್ತಿ ಕೆಲಸ ಮಾಡುತ್ತಾರೆ. ಜನರಿಗೆ ಒಳಿತು ಮಾಡಲೆಂದೇ ರಾಜಕಾರಣಕ್ಕೆ ಬಂದಿದ್ದಾರೆ. ಅವರ ಜೊತೆ ನಾನು ಹಾಗೂ ಮಧು ಬಂಗಾರಪ್ಪ ಇರುತ್ತೇವೆ. ನಮ್ಮ ಮೇಲೆ ನಂಬಿಕೆ ಇಟ್ಟು ಗೀತಾ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ’ ಎಂದು ನಟ ಶಿವರಾಜಕುಮಾರ್ ಮನವಿ ಮಾಡಿದರು.


