
ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವಿನಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ.

18 ವರ್ಷದ ವಿಘ್ನೇಶ್ ಎಂಬಾತನೇ ಜೀವ ಕಳೆದುಕೊಂಡ ಯುವಕ. ನಾಲ್ಕು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹಾಗೂ ಮಾನಸಿಕ ನೋವು ಅನುಭವಿಸುತ್ತಿದ್ದ.ವಿಘ್ನೇಶ್ ಕೊಪ್ಪದಲ್ಲಿರುವ ಐಟಿಐ ಸಂಸ್ಥೆಯಲ್ಲಿ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ.

ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


