
ಮನು ಭಾಕರ್ ಮತ್ತು ಡಿ.ಗುಕೇಶ್ ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ .ಪ್ರತಿಷ್ಠಿತ ಮೇಜರ್ ಧ್ಯಾನ್‌ಚಂದ್ ಖೇಲ್‌ರತ್ನ ಗೌರವಕ್ಕೆ ಪಾತ್ರರಾದರು.

ರಾಷ್ಟ್ರಪತಿ ಭವನದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೀಡಿ ಗೌರವಿಸಿದರು. ಅಥ್ಲೀಟ್‌ಗಳು ಅದ್ದೂರಿ ಸ್ವಾಗತ ಪಡೆದುಕೊಂಡು ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾದರು.ಈ ಕಾರ್ಯಕ್ರಮದಲ್ಲಿ 32 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ಪ್ರದಾನ ಮಾಡಲಾಯಿತು, ಇದು ಭಾರತ ಎರಡನೇ ಅತ್ಯುನ್ನತ ಕ್ರೀಡಾ ಗೌರವವು ಹೌದು





