

ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ನರ್ಸ್ ಕ್ವಾರ್ಟರ್ಸ್ ನಲ್ಲಿ ತಾಯಿಯೇ ಮಗಳನ್ನ ಕೊಂದು ತಾನು ಆತ್ಮಹತ್ಯೆ ಶರಣಾಗಿದ್ದಾರೆ. ಇಂದು ಮುಂಜಾನೆ ಈ ದಾರುಣ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿರುವ ರಾಮಣ್ಣ ಅವರು

ರಾತ್ರಿ ಪಾಳಿಯ ಕೆಲಸ ಮುಗಿಸಿ ಮನೆಗೆ ಬಂದಾಗ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಸ್ಥಳೀಯರ ಸಹಾಯದಿಂದ ಬಾಗಿಲು ಮುರಿದು ಒಳ ಹೋದಾಗ ಇದು ಬೆಳಗಿಗೆ ಬಂದಿದೆ. .6ನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾ ಅವರನ್ನ ತಾಯಿಯೇ ಕೊಲೆ ಮಾಡಿ,

ಶೃತಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ತಲೆ ಮೇಲೆ ನಿಂತ ತಾಯಿ ಆತ್ಮಹತ್ಯೆ ಗೆ ಶರಣಾಗಿದ್ದಾಳೆ.ಸ್ಥಳೀಯರ ಪ್ರಕಾರ ಶೃತಿ ಅವರು ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

